ರಸ್ತೆ ಅಭಿವೃದ್ಧಿ ಕಾಮಗಾರಿ ವಿಕ್ಷೀಸಿದ ಶಾಸಕ ಎಂ.ಆರ್. ಮಂಜುನಾಥ್

Bangarappa c journalist
Bangarappa c journalist - Journalist
1 Min Read

ರಸ್ತೆ ಅಭಿವೃದ್ಧಿ ಕಾಮಗಾರಿ ವಿಕ್ಷೀಸಿದ ಶಾಸಕ ಎಂ.ಆರ್. ಮಂಜುನಾಥ್

ಹನೂರು:ಹನೂರು ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದ ಗೋಡಸ್ ನಗರದಿಂದ ಕ್ರಿಸ್ತರಾಜ್ ಅವರ ಮನೆಯವರೆಗೆ ಸುಮಾರು 2 ಕಿ.ಮೀ. ಉದ್ದದ ರಸ್ತೆಯನ್ನು ಶಾಸಕರ ಅನುದಾನದ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಶಾಸಕ ಎಂ.ಆರ್. ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಡ್ಡರದೊಡ್ಡಿ ಗ್ರಾಮದ ಗೋಡಸ್ ನಗರದಿಂದ ಕ್ರಿಸ್ತರಾಜ್ ಅವರ ಮನೆಯವರೆಗೆ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಬಹುದಿನಗಳಿಂದ ಮನವಿ ಸಲ್ಲಿಸುತ್ತಿದ್ದರು. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿದ ಶಾಸಕರು ಈ ಹಿಂದೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮಸ್ಥರ ಹಲವಾರು ವರ್ಷಗಳ ಬಹುದಿನದ ಬೇಡಿಕೆಯಂತೆ ಸುಮಾರು 30 ಅಡಿ ಅಗಲದಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರು ಸಂಪೂರ್ಣವಾಗಿ ಸಹಕಾರ ನೀಡುವಂತೆ ಸೂಚನೆ ನೀಡಿದರು

ಗ್ರಾಮದ ರಸ್ತೆ ಅಭಿವೃದ್ಧಿಗೆ ಅಸ್ತು :
ಅದರಂತೆ ಗ್ರಾಮಸ್ಥರು ಸಹಕಾರ ನೀಡಿದ ಹಿನ್ನೆಲೆಯಲ್ಲಿ ಇದೀಗ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಸ್ಥರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಮಣಿ, ಡಿ ಆರ್ ಹಾರ್ದಿವೆರ್ ಸೀನಣ್ಣ, ಬಾಲಯ್ಯ, ಕ್ರಿಸ್ತರಾಜ್, ಹುಚ್ಚಯ್ಯ, ಮದಲೈಮುತ್ತು, ಪೌಲ್, ಅಂತೋನಿ, ಎಸ್.ಆರ್. ಮಹದೇವ್, ಮಹದೇವ, ವೆಂಕಟೇಶ್, ಮಹೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Share This Article