ಬಂಡೂರು ಕುರಿ ತಳಿ ಸಂವರ್ಧನ ಕೇಂದ್ರ ಸ್ಥಾಪನೆಗೆ ಸಾರ್ವಜನಿಕರ ಒಪ್ಪಿಗೆ.

ಮರಗಳ ತೆರವು ಪ್ರಕ್ರಿಯೆಗೆ ಸಾರ್ವಜನಿಕರಿಂದ ಒಪ್ಪಿಗೆ :
ವರದಿ:ಆನಂದ್ ಕುಮಾರ್ .
ಪಿರಿಯಾಪಟ್ಟಣ: ತಾಲ್ಲೂಕಿನ ಕಂಪಲಾಪುರ ಕೇಂದ್ರೀಯ ಸಸ್ಯಕೇಂದ್ರದ ಆವರಣದಲ್ಲಿ ಬಂಡೂರು ಕುರಿ ತಳಿ ಸಂವರ್ಧನ ಕೇಂದ್ರ ಸ್ಥಾಪಿಸುವ ಉದ್ದೇಶದಿಂದ ಸ್ಥಳದಲ್ಲಿರುವ ಮರಗಳನ್ನು ತೆರವುಗೊಳಿಸುವ ಕುರಿತು ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಲಹಾ ಸಭೆ ಆಯೋಜಿಸಲಾಗಿತ್ತು.
ಹುಣಸೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಕಂಪಲಾಪುರದ ಅರಣ್ಯ ಇಲಾಖೆಗೆ ಸೇರಿದ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿ ಬಂಡೂರು ಕುರಿ ತಳಿ ಸಂವರ್ಧನ ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಜಾಗವನ್ನು ಪಶುಸಂಗೋಪನಾ ಇಲಾಖೆಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯಬೇಕಿದ್ದು, ನಿಯಮಾನುಸಾರ ಸಾರ್ವಜನಿಕರ ಅಭಿಪ್ರಾಯ ಹಾಗೂ ಸಲಹೆ ಪಡೆಯುವ ಉದ್ದೇಶದಿಂದ ಸಭೆ ಕರೆಯಲಾಗಿದೆ. ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದರೆ ಮುಕ್ತವಾಗಿ ತಿಳಿಸುವಂತೆ ಮನವಿ ಮಾಡಿದರು.ಕಂಪಲಾಪುರ ವ್ಯಾಪ್ತಿಯ ಸರ್ವೆ ನಂಬರ್ 154 ಮತ್ತು 155ರಲ್ಲಿರುವ ಒಟ್ಟು 19 ಎಕರೆ ಜಮೀನನ್ನು ಸಂವರ್ಧನ ಕೇಂದ್ರ ಸ್ಥಾಪನೆಗಾಗಿ ವರ್ಗಾಯಿಸಲು ಉದ್ದೇಶಿಸಲಾಗಿದೆ. ಈ ಪ್ರದೇಶದಲ್ಲಿ 100 ಕ್ಕಿಂತ ಕಡಿಮೆ ಇರುವ ಮರಗಳಿರುವ ಸ್ಥಳಗಳನ್ನು ಗುರುತಿಸಲಾಗಿದ್ದು ಇಲ್ಲಿ ಸರಕಾರ ನಿರ್ಧಾರಿಸಿರುವ ಯೋಜನೆಗೆ ಮರಗಳನ್ನ ತೆರೆವು ಗೊಳಿಸಲು ಸರಕಾರಕ್ಕೆ ವರದಿ ಸಿದ್ದಪಡಿಸಿ ಕಳುಹಿಸಿಕೊಡುವಂತೆ ತಿಳಿಸಲಾಗಿದೆ ಅದರಂತೆ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಸಾರ್ವಜನಿಕರು ಮರಗಳ ತೆರವಿಗೆ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮರಗಳ ತೆರವು ಪ್ರಕ್ರಿಯೆ ನಡೆಸಲು ಸಹಮತ ಸೂಚಿಸಿದರು.
ಕಂಪಲಾಪುರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ ಬಂಡೂರು ಕುರಿ ಸಮವರ್ಧನ ಕೇಂದ್ರ ಸ್ಥಾಪಿಸಲು ಸರ್ಕಾರ ನಮ್ಮ ಗ್ರಾಮವನ್ನು ಆಯ್ಕೆ ಮಾಡಿರುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸುತ್ತೇವೆ. ಶೀಘ್ರವೇ ಈ ಯೋಜನೆ ಕಾರ್ಯರೂಪಕ್ಕೆ ಬಂದು ತಾಲೂಕಿನ ರೈತರು ಸೇರಿದಂತೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮರಿಗಳು ಸಿಗುವಂತಾಗಲಿ. ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಅರಣ್ಯ ಇಲಾಖೆ ಶೀಘ್ರವೇ ಪಶು ಸಂಗೋಪನ ಇಲಾಖೆಗೆ ವರ್ಗಾಯಿಸಲು ಅಗತ್ಯವಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಮ್ಮೆಲ್ಲರ ಸಹಕಾರವಿದೆ. ಎಲ್ಲರೂ ಹರಾಜು ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿರುವುದರಿಂದ ಅಧಿಕಾರಿಗಳು ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲ ವಲಯ ಅರಣ್ಯ ಅಧಿಕಾರಿ ಪದ್ಮಶ್ರೀ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಶು ಸಂಗೋಪನ ಸಹಾಯಕ ನಿರ್ದೇಶಕ ಸೋಮಯ್ಯ, ವಲಯ ಅರಣ್ಯ ಅಧಿಕಾರಿ ಪದ್ಮಶ್ರೀ, ಬೆಟ್ಟದಪುರ ಉಪವಲಯ ಅರಣ್ಯ ಅಧಿಕಾರಿ ವಿಲಾಸ್ ರಾವ್, ಮೈಸೂರು ನಿರ್ಮಿತಿ ಕೇಂದ್ರದ ಕಿರಿಯ ಅಭಿಯಂತರ ಅಹ್ಮದ್, ಗ್ರಾಮದ ಮುಖಂಡರು,ಅರಣ್ಯ ಇಲಾಖೆ ಮತ್ತು ಪಶು ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
