ಶ್ರೀರಾಮಚಂದ್ರ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ
ಚಾಮರಾಜನಗರ, ನ.೧೪- ಮಾಜಿ ಪ್ರದಾನಿ ಜವಹಲಾಲ್ ನೆಹರು ಜನ್ಮದಿನದ ಅಂಗವಾಗಿ ದೇಶದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತೇವೆ. ನೆಹರು ಅವರ ಸ್ಮರಣೆಯ ಜೊತೆಯಲ್ಲಿ ದೇಶದ ಭಾವಿ ಪ್ರಜೆಗಳಾದ ಮಕ್ಕಳಿಗೆ ದೇಶ ನಿರ್ಮಾಣದ ಬಗ್ಗೆ ಜಾಗೃತಗೊಳಿಸಬೇಕು ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ರುದ್ರಮೂರ್ತಿ ತಿಳಿಸಿದರು.
ನಗರದ ನ್ಯಾಯಾಲಯ ರಸ್ತೆಯಲ್ಲಿ ಇರುವ ಶ್ರೀರಾಮಚಂದ್ರ ಪ್ರೌಢಶಾಲೆಯ ಆವರಣದಲ್ಲಿ ಜವಹಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶಕ್ಕೆ ಸ್ವಾತಂತ್ರö್ಯದ ನಂತರ ಅವರು ಬಹಳಷ್ಟು ಕೊಡುಗೆಯನ್ನು ದೇಶಕ್ಕೆ ನೀಡಿದ್ದಾರೆ. ಅವರಿಗೆ ಮಕ್ಕಳೆಂದರೇ ಬಹಳ ಪ್ರೀತಿ ಆದರಿಂದ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದರು.
ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್.ಮಾದಯ್ಯ ಅವರು ಮಾತನಾಡಿ ಭಾರತದ ಮೊಟ್ಟ ಮೊದಲ ಪ್ರದಾನಿ ಜವಹಲಾಲ್ ನೆಹರು. ಮಹಾತ್ಮ ಗಾಂಧಿಜೀಯವರ ಜೊತೆ ಸೇರಿ ನಮ್ಮ ದೆಶಕ್ಕೆ ಸ್ವಾತಂತ್ರö್ಯ ಬರಲು ಹೋರಾಟಮಾಡಿ ಜೈಲಿನಲ್ಲಿ ಇದ್ದು ಬಂದವರು. ಶ್ರೀಮಂತ ಕುಟುಂಬದಿAದ ಬಂದ ಅವರು ದೇಶಕ್ಕಾಗಿ ಶ್ರಮಿಸಿದ್ದಾರೆ. ವಿದ್ಯಾರ್ಥಿಗಳು ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ನಿರ್ದೆಶಕರಾದ ಬಿ.ಮಹದೇವಯ್ಯ ಮಾತನಾಡಿ ಪ್ರತಿಯೊಬ್ಬ ಮಕ್ಕಳು ವಿದ್ಯಾವಂತರಾಗಬೇಕು, ನೆಹರು ಅವರ ಸಂದೇಶವಾಗಿತ್ತು. ನಮ್ಮ ಶಾಲೆಗೆ ಚಾಮರಾಜನಗರ ಗಡಿ ಪ್ರದೇಶದಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಅವರಿಗೆ ಶಿಕ್ಷಣದ ಜೊತೆಯಲ್ಲಿ ಮಹಾನಿಯರ ಜಯಂತಿಗಳನ್ನು ಆಚರಿಸಿ ಅವರ ಬಗ್ಗೆ ತಿಳಿಸಿಕೊಡುವ ಕಾರ್ಯಗಳನ್ನು ನಮ್ಮ ಶಿಕ್ಷಕರು ಮಾಡುತ್ತಿದ್ದಾರೆ ಎಂದರು.
ಉಚಿತವಾಗಿ ೮೦ ವಿದ್ಯಾರ್ಥಿಗಳಿಗೆ ಸ್ಕೂಲ್ಬ್ಯಾಗ್ ವಿತರಿಸಿದ ಖಾಸಗಿ ಹೋಟೇಲ್ ಉದ್ಯಮಿ ಮಹದೇವಸ್ವಾಮಿ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಯಲ್ಲಿ ಬಿಸಿಊಟವನ್ನು ಸರ್ಕಾರ ನೀಡುತ್ತಿದೆ. ಮಕ್ಕಳು ಶಿಕ್ಷಣಕ್ಕೆ ಒತ್ತು ನೀಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು. ನಮ್ಮ ಕುಟುಂಬದಿAದ ಹಲವಾರು ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ಹಾಗೂ ಶಾಲೆಗೆ ಬೇಕಾಗುವ ಉಪಕರಣಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದರ ಉದ್ದೇಶ ಬಿ.ಆರ್.ಅಂಬೇಡ್ಕರ್ ಅವರ ರೀತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯಬೇಕು ಎಂಬುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಪರಶಿವಮೂರ್ತಿ, ದೈಹಿಕ ಶಿಕ್ಷಕ ರಂಗಸ್ವಾಮಿ.ಎಸ್, ಯಶ್ಪಾಲ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು
.
