ಬೇಲೂರು:
ಕಾಡಾನೆ ದಾಳಿಗೆ ಮಹಿಳೆ ಬಲಿ ಗ್ರಾಮಸ್ಥರಲ್ಲಿ ಆತಂಕ
ಕುಶಾವರ ಪಂಚಾಯಿತಿ ವ್ಯಾಪ್ತಿಯ ಚೌಡನಹಳ್ಳಿಯಲ್ಲಿ ಘಟನೆ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೇಲೂರು ತಾಲೂಕಿನ ಕುಶಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಚೌಡನಹಳ್ಳಿ ಗ್ರಾಮದ ನಿವಾಸಿ ಜಯಮ್ಮ ಮೃತ ದುರ್ದೈವಿ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ವೇಳೆ ತೋಟದ ಬಳಿ ತೆರಳಿದ್ದಾಗ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಜಯಮ್ಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಆನೆಗಳನ್ನು ಸ್ಥಳಾಂತರಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
