ಯಶಸ್ವಿಯಾಗಿ ನಡೆಸಿದ ಲೊಕ್ಕನಹಳ್ಳಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ: ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Bangarappa c journalist
Bangarappa c journalist - Journalist
1 Min Read

ಹನೂರು : ಲೊಕ್ಕನಹಳ್ಳಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ .ಹನೂರು ವಿಧಾನಸಭಾ ಕ್ಷೇತ್ರದ
ಲೊಕ್ಕನಹಳ್ಳಿಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸ್ಥಳೀಯ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿರುವ ರಸ್ತೆ ಸಂಪರ್ಕ, ಕುಡಿಯುವ ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಚರಂಡಿ ವ್ಯವಸ್ಥೆ ಹಾಗೂ ವಸತಿ ಯೋಜನೆಗಳ ಕುರಿತು ಇದ್ದ ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮೀಣ ಭಾಗದ ಜನರು ತಮ್ಮ ದೈನಂದಿನ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡರು.

ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಕ್ಷೇತ್ರದ ಶಾಸಕರಾದ ಎಮ್.ಆರ್. ಮಂಜುನಾಥ್ ಅವರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಸೂಕ್ತ ಪರಿಹಾರ ಕಲ್ಪಿಸುವಂತೆ ಮತ್ತು ಬಾಕಿ ಉಳಿದ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಕಾರ್ಯಕ್ರಮದ ಮೂಲಕ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವು ನೇರವಾಗಿ ಜನರ ಬಳಿಗೆ ತಲುಪಿದ್ದು, ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.

Share This Article