ಕೆಂಪೇಗೌಡ ವೃತ್ತದ ಮೊರಾರ್ಜಿ ಶಾಲೆಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ ಆಚರಣೆ

Bangarappa c journalist
Bangarappa c journalist - Journalist
1 Min Read

ಕೆಂಪೇಗೌಡ ವೃತ್ತದ ಮೊರಾರ್ಜಿ ಶಾಲೆಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ ಆಚರಣೆ

ರಾಮನಗರ :
ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಹಿಂದುಳುದ‌ ವರ್ಗಗಳ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ಸ್ವಾತಂತ್ರ್ಯ ಹೋರಾಟಗಾರ, ಆದಿವಾಸಿ ಸಮುದಾಯದ ಮಹಾನ್ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ರೂಪಾ ಅವರು ಮಾತನಾಡಿ, ಬ್ರಿಟಿಷರ ಆಡಳಿತದ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ ಅವರು ಆದಿವಾಸಿಗಳ ಹಕ್ಕು, ಸ್ವಾಭಿಮಾನ, ಸಂಸ್ಕೃತಿ ಹಾಗೂ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಹೋರಾಟಗಾರರಾಗಿದ್ದರು. ಅವರ ಧೈರ್ಯ, ಹೋರಾಟದ ಮನೋಭಾವ ಮತ್ತು ದೇಶಪ್ರೇಮ ಇಂದಿನ ಮಕ್ಕಳಿಗೆ ಪೀಳಿಗೆಗೆ ಸದಾ ಪ್ರೇರಣೆಯಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಬಿರ್ಸಾ ಮುಂಡಾ ಅವರ ಜೀವನ ಚರಿತ್ರೆ, ಹೋರಾಟ ಮತ್ತು ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಸಾಮಾಜಿಕ ಜಾಗೃತಿಯ ಸಂದೇಶವನ್ನು ಸಾರಿದರು.

Share This Article