ಸಹಕಾರ ಕ್ಷೇತ್ರವು ಗ್ರಾಮೀಣ ಭಾಗದ ರೈತರು, ಹೈನುಗಾರರು, ಸಾಮಾನ್ಯ ಜನರ ಆರ್ಥಿಕ ಮತ್ತ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವ ಪಾತ್ರ ವಹಿಸುತ್ತಿದೆ. ನಿರ್ದೇಶಕ ನಂಜುಂಡ ಪ್ರಸಾದ್.

Bangarappa c journalist
Bangarappa c journalist - Journalist
1 Min Read

ಕೊಳ್ಳೇಗಾಲ:ಸಹಕಾರ ಕ್ಷೇತ್ರವು ಗ್ರಾಮೀಣ ಭಾಗದ ರೈತರು, ಹೈನುಗಾರರು, ಸಾಮಾನ್ಯ ಜನರ ಆರ್ಥಿಕ ಮತ್ತ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವ ಪಾತ್ರ ವಹಿಸುತ್ತಿದೆ. ನಿರ್ದೇಶಕ ನಂಜುಂಡ ಪ್ರಸಾದ್.

ಪಟ್ಟಣದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಜಿಲ್ಲಾ ಸಹಕಾರ ಯೂನಿಯನ್ ಮೈಸೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್), ಕುದೇರ್, ಮಧುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳು, ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 73ನೇ ಸಹಕಾರ ಸಪ್ತಾಹ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ ವಿಚಾರ. ರಾಜ್ಯದಾದ್ಯಂತ ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು, ಸಹಕಾರ ಚಳವಳಿಯ ಆಶಯಗಳು ಹಾಗೂ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಸಹಕಾರ ಇಲಾಖೆಯು ರೈತಾಪಿ ವರ್ಗದ ಜನರಿಗೆ ತಳಮಟ್ಟದಿಂದಲೇ ವಿವಿಧ ರೀತಿಯಲ್ಲಿ ನೆರವು ನೀಡುತ್ತಿದೆ. ರೈತರು ಮತ್ತು ಹೈನುಗಾರರು ಆರ್ಥಿಕವಾಗಿ ಸದೃಢರಾಗಲು ಸಹಕಾರ ಸಂಘಗಳು ಪ್ರಮುಖ ವೇದಿಕೆಯಾಗಿವೆ ಎಂದು ಹೇಳಿದರು.

ಸಹಕಾರ ಸಂಘಗಳ ಮೂಲಕ ಗ್ರಾಮೀಣ ಜನರಿಗೆ ಆರ್ಥಿಕ ನೆರವು, ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಹಾಗೂ ಹೈನುಗಾರಿಕೆಗೆ ಅಗತ್ಯವಾದ ಬೆಂಬಲ ದೊರೆಯುತ್ತಿದೆ. ಸಹಕಾರ ತತ್ವದಡಿ ಸಂಘಟಿತರಾಗಿ ಕಾರ್ಯನಿರ್ವಹಿಸುವುದರಿಂದ ಸದಸ್ಯರಲ್ಲಿ ಪರಸ್ಪರ ಸಹಕಾರ, ವಿಶ್ವಾಸ ಮತ್ತು ಆರ್ಥಿಕ ಶಿಸ್ತು ಬೆಳೆಯಲು ಸಾಧ್ಯವಾಗುತ್ತದೆ. ಸಹಕಾರ ಕ್ಷೇತ್ರದ ಉದ್ದೇಶ ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಯನ್ನು ಸಾಧಿಸುವುದಾಗಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ, ಚಾಮುಲ್ ನಿರ್ದೇಶಕರಾದ ಎಸ್. ಮಹದೇವಸ್ವಾಮಿ (ಉದ್ದನೂರು ಪ್ರಸಾದ್), ಪಿ. ಮಹದೇವಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಡಿ. ಅಶೋಕ್, ಸಹಕಾರ ಸಂಘಗಳ ಉಪನಿಬಂಧಕರಾದ ಜಿ.ಸಿ. ಜ್ಯೋತಿಅರಸ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಪಿ. ಶೋಭ, ಸಹಕಾರ ಅಭಿವೃದ್ಧಿ ಅಧಿಕಾರಿ ಸಿದ್ಧಲಿಂಗಮೂರ್ತಿ, ಸಹಕಾರ ಕ್ಷೇತ್ರದ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Share This Article