ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರು ಇಂದು ಮಹದೇವಪುರದ ಕ್ಷೇತ್ರದ ಗುಂಜೂರಿನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ಸ್ಥಿತಿಸ್ಥಾಪಕತ್ವ ಕಾರ್ಯಕ್ರಮದಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ₹2,000 ಕೋಟಿ ವೆಚ್ಚದ ಮಳೆನೀರುಗಾಲುವೆ ಮತ್ತು ಪ್ರವಾಹ ನಿರ್ವಹಣಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಕಾಮಗಾರಿಗಳು ಮಳೆಗಾಲದ ಪ್ರವಾಹ ಸಮಸ್ಯೆಗೆ ಪರಿಹಾರ ಕಲ್ಪಿಸುವುದರ ಜೊತೆಗೆ, ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಿ ನಾಗರಿಕರ ಸುರಕ್ಷತೆ ಮತ್ತು ಸುಗಮ ಬದುಕಿಗೆ ನೆರವಾಗಲಿವೆ.
ಈ ಸಂದರ್ಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ರಾಜ್ಯಸಭಾ ಸದಸ್ಯರಾದ ಶ್ರೀ ಮನ್ಸೂರ್ ಅಲಿ ಖಾನ್, ಶಾಸಕರಾದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯರಾದ ಶ್ರೀ ಎ.ಪಿ. ರಂಗನಾಥ್, ಮಾಜಿ ಸಚಿವರಾದ ಶ್ರೀ ಹೆಚ್. ನಾಗೇಶ್, ಜಿಬಿಎ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.
