
ಕಾಲಮಿತಿಯಲ್ಲೆ ರಾಜ್ಯ ಸಾರಿಗೆ ನಿಗಮದ ಘಟಕ ಕಾರ್ಯ ಪೂರ್ಣಗೊಳಿಸಲು ಶಾಸಕರಾದ ಎಮ್ ಆರ್ ಮಂಜುನಾಥ್ ಸೂಚನೆ.
ಹನೂರು : ಕ್ಷೇತ್ರದ ಪ್ರಸಿದ್ದ ಯಾತ್ರಸ್ಥಳವಾದ ಶ್ರೀ ಮಲೆಮಹದೇಶ್ವರ ಬೆಟ್ಟ ಸೇರಿದಂತೆ ವಿವಿಧೆಡೆ ನೂತನ ಬಸ್ ಘಟಕ ಕಾರ್ಯಾರಂಭ ಮಾಡಿದ ಬಳಿಕ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಬಸ್ ಸೇವೆ ಒದಗಿಸಲು ಅನುಕೂಲವಾಗಲಿದೆ. ಎಲ್ಲಾರಿಗೂ ಸುಗಮ ಸಂಚಾರ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಲಿದೆ. ಇದರಿಂದ ಸಾರ್ವಜನಿಕರ ಬಹುದಿನಗಳ ಸಮಸ್ಯೆಗೆ ಪರಿಹಾರ ದೊರೆಯುವುದರೊಂದಿಗೆ ಕ್ಷೇತ್ರದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುದಾರಿಸಿದಂತಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆಯಲ್ಲಿ 7.52 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್ಆರ್ಟಿಸಿ ಬಸ್ ಘಟಕದ ಕಾಮಗಾರಿ ನಿರ್ಮಾಣ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ , ಕಟ್ಟಡ ನಿರ್ಮಾಣದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಮತ್ತು ನಿಗದಿತ ಕಾಲ ಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
, ಹನೂರು ತಾಲ್ಲೂಕು ಕೇಂದ್ರವಾಗಿದ್ದರೂ ಈವರೆಗೆ ಸ್ವಂತ ಕೆಎಸ್ಆರ್ಟಿಸಿ ಬಸ್ ಘಟಕವಿಲ್ಲದ ಕಾರಣ ಸಾರ್ವಜನಿಕರು ಸಾರಿಗೆ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದರು. ಅದರಲ್ಲೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವುದು ಸವಾಲಾಗಿತ್ತು. ಹೀಗಾಗಿ ಹನೂರಿನಲ್ಲಿ ಬಸ್ ಘಟಕ ಸ್ಥಾಪಿಸಬೇಕೆಂಬುದು ತಾಲ್ಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಎಂದರು
ಕ್ಷೇತ್ರದ ಜನರ ಈ ಬೇಡಿಕೆಗೆ ಸ್ಪಂದಿಸಿ, ನಮ್ಮ ಅವಧಿಯಲ್ಲಿ 7.52 ಕೋಟಿ ರೂ. ವೆಚ್ಚದಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಇಂಜಿನಿಯರ್ ಪವನ್, ಮುಖಂಡರುಗಳಾದ ಗುರುಸ್ವಾಮಿ, ನಟರಾಜುಗೌಡ, ಗೋವಿಂದ, ಚಿಕ್ಕಸ್ವಾಮಿ, ಶಿವು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
