ಅದ್ದೂರಿ ವೈಭವದ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಮಲ್ಲಸಂದ್ರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ!*

Bangarappa c journalist
Bangarappa c journalist - Journalist
1 Min Read
  1. ಅದ್ದೂರಿ ವೈಭವದ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಮಲ್ಲಸಂದ್ರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ!*

*ಮಲ್ಲಸಂದ್ರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅದ್ದೂರಿ ವೈಭವದ ಜಾತ್ರಾ ಮಹೋತ್ಸವದ ಅಂಗವಾಗಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರರು, ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎಸ್. ಮುನಿರಾಜಣ್ಣ ರವರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು.*

*ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿದ ಜಾನಪದ ಕಲಾ ತಂಡಗಳ ಕಲಾವಿದರಿಗೆ ಗೌರವ ಭತ್ಯೆ ನೀಡಿ ಅಭಿನಂದಿಸಿ, ಅವರ ಕಲಾಸೇವೆಯನ್ನು ಗೌರವಿಸಿದರು.*
*ಜೊತೆಗೆ ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಿಶೇಷ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಕ್ತಿಭಾವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.*

*ಈ ಸಂದರ್ಭದಲ್ಲಿ ಮಲ್ಲಸಂದ್ರ ವಾರ್ಡ್‌ನ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.*

Share This Article