ಮಾರ್ಗಸೂಚಿ ದರ ಪರಿಷ್ಕರಣೆ ಕರಡು ಪ್ರಕಟಣೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ.
ಪಿರಿಯಾಪಟ್ಟಣ: 2026-27ನೇ ಸಾಲಿನ ಪಿರಿಯಾಪಟ್ಟಣ ತಾಲ್ಲೂಕಿನ ಕಸಬಾ ಮತ್ತು ರಾವಂದೂರು ಹೋಬಳಿಗಳ ವ್ಯಾಪ್ತಿಗೆ ಒಳಪಡುವ ಜಮೀನು ಹಾಗೂ ನಿವೇಶನಗಳ ಮಾರುಕಟ್ಟೆ ಮಾರ್ಗಸೂಚಿ ದರವನ್ನು ಪರಿಷ್ಕರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.
ಈ ಸಂಬಂಧ ಪರಿಷ್ಕರಣೆಗೆ ಸಂಬಂಧಿಸಿದ ಕರಡು ದರ ಪಟ್ಟಿಯನ್ನು ಪಿರಿಯಾಪಟ್ಟಣ ಉಪ ನೋಂದಣಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಕರಡು ದರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ 15 ದಿನಗಳೊಳಗಾಗಿ ಪಿರಿಯಾಪಟ್ಟಣ ಉಪ ನೋಂದಣಾಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಗಸೂಚಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಪ್ರಕಟಿತ ಕರಡು ಪಟ್ಟಿಯನ್ನು ಪರಿಶೀಲಿಸಿ, ತಮ್ಮ ಆಕ್ಷೇಪಣೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಕೋರಲಾಗಿದೆ.
