ರೈತರಿಗೆ ಸಾಲದ ಚೆಕ್‌ ವಿತರಣೆ: ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಬಲ

Bangarappa c journalist
Bangarappa c journalist - Journalist
1 Min Read

ರೈತರಿಗೆ ಸಾಲದ ಚೆಕ್‌ ವಿತರಣೆ: ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಬಲ

ರೈತರ ಕೃಷಿ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸುವ ಮತ್ತು ಕೃಷಿ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ರಾಮಾಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ವತಿಯಿಂದ ಇಂದು ಸಂಘದ ವ್ಯಾಪ್ತಿಯ ರೈತರಿಗೆ ಹೊಸದಾಗಿ ಮಂಜೂರಾಗಿರುವ ಸಾಲದ ಚೆಕ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ಎಂಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶ್ರೀ ಆರ್. ನರೇಂದ್ರ ರಾಜುಗೌಡ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ಸಾಲದ ಚೆಕ್‌ಗಳನ್ನು ವಿತರಿಸಿ, ರೈತರ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ಸಂಘಗಳು ಸದಾ ಬದ್ಧವಾಗಿವೆ ಎಂದು ತಿಳಿಸಲಾಯಿತು.
ಸಹಕಾರ ಸಂಘಗಳ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಮತ್ತು ಸಕಾಲದಲ್ಲಿ ಸಾಲ ಸೌಲಭ್ಯ ಕಲ್ಪಿಸುವುದರಿಂದ ರೈತರು ಕೃಷಿಯಲ್ಲಿ ಹೆಚ್ಚಿನ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯಪಡಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರುಗಳು, ಸಂಘದ ಸಿಬ್ಬಂದಿ ವರ್ಗ ಹಾಗೂ ಹೈನುಗಾರರು ಮತ್ತು ರೈತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share This Article