ಆನೆ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್
ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆಯೊಂದು ಬೈಕ್ ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ಅಟ್ಯಾಕ್ ಗೆ ಮುಂದಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ವಯನಾಡು ರಸ್ತೆಯಲ್ಲಿ ನಡೆದಿದ್ದು, ಬೈಕ್ ಸವಾರ ಆನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ವಯನಾಡಿಗೆ ಹೋಗುವ ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರ ಮೇಲೆ ದಾಳಿಗೆ ಮುಂದಾಗಿದೆ. ಎಚ್ಚೇತ್ತ ಸವಾರ ಬೈಕ್ ಅನ್ನು ಹಿಮ್ಮುಖವಾಗಿ ತಿರುಗಿಸಿ ಚಲಾಯಿಸಿದ್ದಾರೆ. ಮತ್ತೋರ್ವ ಸವಾರ ಬೈಕ್ ಬಿಟ್ಟು ಓಡಿದ್ದು ಈ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
