18 ಕನಕಪುರ 1: ನಗರದ ಆರ್.ಇ.ಎಸ್. ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಶ್ರೀಕಂಠ ಅವರ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಆಡಳಿತ ಮಂಡಳಿಯ ಪ್ರತಿನಿಧಿಗಳು, “ನಮ್ಮ ತಂಡದ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿರುವ ಎಲ್ಲರಿಗೂ ಕೃತಜ್ಞತೆಗಳು. ಸಂಸ್ಥೆಯ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ ಹಾಗೂ ಜನಸೇವೆಗೆ ಆದ್ಯತೆ ನೀಡಿ ಎಲ್ಲರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಿದ್ದೇವೆ. ಮುಖ್ಯಮಂತ್ರಿಗಳ ಮಾರ್ಗದರ್ಶನ ಮತ್ತು ಸಹಕಾರವನ್ನು ನಿರೀಕ್ಷಿಸುತ್ತೇವೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಶುಭ ಹಾರೈಸಿದರು. ನೂತನ ತಂಡದ ಸದಸ್ಯರು ಉಪಸ್ಥಿತರಿದ್ದರು.
